ಬೀದರ್ : ಬೀದರ್ ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಎಟಿಎಂ ಗಳಿಗೆ ಹಣ ಹಾಕುವ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗುಂಡಿನ ದಾಳಿಯಲ್ಲಿ ಬೀದರ್ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೀದರ್ ನಗರದ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವ್ಯಕ್ತಿಯ ಮೇಲೆ ಗುಂಡುಹಾರಿಸಿದ್ದಾರೆ. 5 ಸುತ್ತು ಗುಂಡು ಹಾರಿಸಿದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಗಿರಿ ವೆಂಕಟೇಶ್ ಎಂಬುವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.