ಬೀದರ್: ಬೀದರ್ ನಲ್ಲಿ ಬೆಳ್ಳಂಬೆಳಗ್ಗೆ ಅಪರಿಚಿತರು SBI ಬ್ಯಾಂಕ್ ನ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ 93 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಬೀದರ್ ನ ಚಿದ್ರಿ ನಿವಾಸಿ ಗಿರಿ ವೆಂಕಟೇಶ (40) ಎಂದು ಗುರುತಿಸಲಾಗಿದೆ.
ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.