ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಅನಧಿಕೃತ ಕ್ಲಿನಿಕ್ ಮತ್ತು ಮೆಡಿಕಲ್‌ಗಳು ಕಂಡು ಬಂದ ಕುರಿತು ವರದಿಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಹಲವು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದಾರೆ.
ಬೇರೆ ರಾಜ್ಯಗಳಿಂದ ನಕಲಿ ವೈದ್ಯಕೀಯ ಪ್ರಮಾಣಪತ್ರ ಪಡೆದು ಬೆಂಗಳೂರಿನಲ್ಲಿ ಬಂದು ಕಾರ್ಯನಿರ್ವಹಿಸುತ್ತಿದ್ದ ನಕಲಿ ಕ್ಲಿನಿಕ್‌ಗಳನ್ನು ಸೀಜ್ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಜನರ ಜೀವದ ಜೊತೆಗೆ ಆಟವಾಡುವ ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ವೈದ್ಯರ ತಡೆಗೆ ಕಾನೂನು ತಿದ್ದುಪಡಿ ಮಾಡಿ ಕಠಿಣ ಕಾಯ್ದೆ ಜಾರಿಗೊಳಿಸಲಾಗಿದೆ.
ರಾಜ್ಯದಲ್ಲಿ ಜನರ ಆರೋಗ್ಯ ಸುರಕ್ಷತೆಗೆ ಪ್ರಾಮುಖ್ಯತೆ ನೀಡುವ ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.