ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಬ್ಯಾಂಕಾಕ್ ನಿಂದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.