ಮುಂಬೈ : ಇಂದು ಬೆಳಗಿನ ಜಾವ ಮುಂಬೈನ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ಮಾಡಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಮುಂಬೈ ವಲಯ ಡಿಸಿಪಿ ದೀಕ್ಷಿತ್ ಗೆಡಂ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವನ ಗುರುತು ಪತ್ತೆಯಾಗಿದ್ದು ಆರೋಪಿಗಳು ರಾತ್ರಿ ಸೈಫ್ ಅಲಿಖಾನ್ ಮನೆಗೆ ನುಗ್ಗಿದ್ದಾರೆ. ದಾಳಿ ಬಳಿಕ ಫೈರ್ ಎಕ್ಸಿಟ್ ಮನೆಯ ಮೂಲಕ ಆರೋಪಿಗಳು ಪರಾರಿ ಆಗಿದ್ದಾರೆ.ಮೇಲ್ನೋಟಕ್ಕೆ ಇದು ದರೋಡೆ ರೀತಿ ಕಾಣುತ್ತದೆ ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ನಟ ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಅಭಿಮಾನಿಗಳಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ. ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಅಭಿಮಾನಿಗಳು ತಾಳ್ಮೆಯಿಂದಿರುವಂತೆ ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ. ಪರಿಸ್ಥಿತಿಯ ಕುರಿತು ನಾವು ನಿಮಗೆ ತಿಳಿಸುತ್ತೇವೆ” ಎಂದು ತಿಳಿಸಲಾಗಿದೆ.
ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಮತ್ತು ಕರೀನಾ ಕಪೂರ್ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ, ಆದರೆ ನಟನ ಸಿಬ್ಬಂದಿ ಅವರನ್ನು ತಡೆದರು. ಒಳನುಗ್ಗಿದ ವ್ಯಕ್ತಿ ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದಾಗ ಸೈಫ್ ಮಧ್ಯಪ್ರವೇಶಿಸಿದ ವೇಳೆ ಹಲವು ಬಾರಿ ಚಾಕು ಇರಿಯಲಾಗಿದೆ.