ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಸುಮಾರು 35 ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.
ಸಚಿವ ಸಂಪುಟ ಸಭೆಯಲ್ಲಿ 35 ವಿಷಯಗಳನ್ನು ಚರ್ಚೆ ಮಾಡಿದ್ದೇವೆ ಎಂದು ಸಂಪುಟದ ಸಭೆಯ ನಂತರ ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಕೃಷಿ ತೋಟಗಾರಿಕೆ ಇಂಟಿಗ್ರೇಟೆಡ್ ವಿಶ್ವವಿದ್ಯಾಲಯ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ. ಅಲ್ಲದೇ 5ನೇ ರಾಜ್ಯ ಹಣಕಾಸು ಆಯೋಗದ ಅವಧಿ ವಿಸ್ತರಣೆಗೆ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು.