ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅನುದಾನಕ್ಕೆ ಒಪ್ಪಿಗೆಯನ್ನು ಸೂಚಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು.
ಕಂದಾಯ ಇಲಾಖೆಯ ಡಿಜಿ ಕಂದಾಯ ಅನುದಾನದಲ್ಲಿ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ( ವಿಎ) ಲ್ಯಾಪ್‌ಟಾಪ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 20 ಕೋಟಿ ವೆಚ್ಚದಲ್ಲಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಸ್ಕ್ಯಾನಿಂಗ್ ಮಾಡಿಸುವವರಿಗೆ ಪಿಎಚ್ ಎಚ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿದೆ. ಇತರರಿಗೆ ಶೇಕಡಾ 70% ಶುಲ್ಕ ವಿಧಿಸಲು ನಿರ್ಧಾರಿಸಲಾಗಿದೆ. ಇದಕ್ಕೆ ಸಂಪುಟದ ಒಪ್ಪಿಗೆ ನೀಡಿದೆ ಎಂದರು.