ಮೈಸೂರು : ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯರ ನಡುವೆ ಗಲಾಟೆ ನಡೆದಿದೆ ಈ ವೇಳೆ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಬಳಿಕ ನಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನ ಹುಂಡಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಪತ್ನಿಯನ್ನು ತೇಜಸ್ವಿನಿ (26) ಎಂದು ತಿಳಿದುಬಂದಿದ್ದು, ಪತ್ನಿಯನ್ನು ಕೊಂದ ಪತಿಯನ್ನು ದೇವರಾಜ್ ಎಂದು ತಿಳಿದುಬಂದಿದೆ.ಕೊಲೆ ಬಳಿಕ ದೇವರಾಜ್ ನೇರವಾಗಿ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ, ಮೃತದೇಹವನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.