ಆಂಧ್ರಪ್ರದೇಶ : ಟಿಪ್ಪರ್ ಲಾರಿಯನ್ನು ತಪ್ಪಿಸಲು ಹೋಗಿ ಟೂರಿಸ್ಟ್ ಬಸ್ ಒಂದು ಪಲ್ಟಿಯಾಗಿ ಭೀಕರವಾದ ಅಪಘಾತ ಸಂಭವಿಸಿರುವ ಘಟನೆ ಆಂಧ್ರಪ್ರದೇಶದ, ಚಿತ್ತೂರು ಬಳಿಯ ಗಂಗಾಸಾಗರಂ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.ಈ ಒಂದು ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 22 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್ ಲಾರಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿ ಈ ಒಂದು ಘೋರ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ವೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.