ಮಂಡ್ಯ : ಮಂಡ್ಯದಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಂಸದೆ ಸುಮಲತಾ ಆಪ್ತ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಂಸದೆ ಸುಮಲತಾ ಬೇಲೂರು ಸೋಮಶೇಖರ್ ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸ್ಥಳೀಯ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇಲೂರು ಸೋಮಶೇಖರ್ ಇದೀಗ ಸೇರ್ಪಡೆಯಾಗಿದ್ದಾರೆ. ಸುಮಲತಾಗೆ ಕೈಕೊಟ್ಟು ಏಕಾಏಕಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸೋಮಶೇಖರ್ ಸ್ಪರ್ಧಿಸುತ್ತಿದ್ದಾರೆ.
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇದೀಗ ಗ್ರೀನ್ ಸಿಗ್ನಲ್ ಸಿಕ್ಕಿದೆ ಮಂಡ್ಯ ರಾಜಕಾರಣದಲ್ಲಿ ಸಕ್ರಿಯ ವಾಗುತ್ತೇನೆ ಎಂದಿದ್ದ ಸುಮಲತಾ ಹೊಸ ವರ್ಷದ ಬಳಿಕ ರಾಜಕಾರಣದಲ್ಲಿ ಸಕ್ರಿಯಾಗುತ್ತಿದ್ದೇನೆ ಎಂದು ತಿಳಿಸಿದ್ದರು.ಆದರೆ ಇದೇ ಸಂದರ್ಭದಲ್ಲಿ ಸುಮಲತಾಗೆ ಕೈಕೊಟ್ಟು ಇದೀಗ ಬೇಲೂರು ಸೋಮಶೇಖರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಮಂಡ್ಯದಲ್ಲಿ ಸಹಜವಾಗಿ ಮೈತ್ರಿ ಪಕ್ಷಗಳಿಗೆ ದೊಡ್ಡ ಹೊಡೆತ ಬಿದ್ದಿದೆ ಎನ್ನಲಾಗಿದೆ.