ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಪವಿತ್ರಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಈ ಒಂದು ಮೇಲ್ಮನವಿಯ ಅರ್ಜಿಯ ವಿಚಾರಣೆ ಇದೇ ಜನವರಿ 24ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ
ಹೌದು ನಟ ದರ್ಶನ್ ಮತ್ತು ಗ್ಯಾಂಗ್ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದ್ದು, ಜನವರಿ 24 ರಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಲಿದೆ. ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಮೇಲ್ಮನವಿ ಸಲ್ಲಿಸಿದೆ. ಈ ಒಂದು ಅರ್ಜಿಯ ವಿಚಾರಣೆ ಜನವರಿ 24 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ಅಂದು ಮಹತ್ವದ ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಈಗಾಗಲೇ ನಟ ದರ್ಶನ್ ಅವರು ಹೈಕೋರ್ಟಿನ ರೆಗ್ಯುಲರ್ ಬೇಲ್ ಪಡೆದುಕೊಂಡು, ಪತ್ನಿ ಮಗ ಹಾಗೂ ಕುಟುಂಬ, ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದಾರೆ. ಅತ್ತ ಪವಿತ್ರಗೌಡ ಕೂಡ ಜೈಲಿನಿಂದ ರಿಲೀಸ್ ಆದ ಬೆನ್ನಲ್ಲೇ ಟೆಂಪಲ್ ರನ್ ಮಾಡಿದ್ದು ದೇವಸ್ಥಾನಗಳಿಗೆ ತೆರಳಿ ದರ್ಶನ್ ಹೆಸರಿನಲ್ಲಿ ಪೂಜೆ ಮಾಡಿಸಿದ್ದಾರೆ. ಇದೀಗ ಜನವರಿ 24 ರಂದು ಸುಪ್ರೀಂಕೋರ್ಟ್ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಹಾಗಾಗಿ ಅಂದು ಪ್ರಕರಣದ ಕುರಿತು ತೀವ್ರ ಕುತೂಹಲ ಕೆರಳಿಸಿದೆ.