ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪತ್ತೆಗಾಗಿ ಇದೀಗ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದು, ಸದ್ಯ ಮುಂಬೈನ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಆರೋಪಿಯ ಕುರುಹು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಮುಂಬೈ ಪೋಲಿಸರಿಂದ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಬಾಂದ್ರಾ ರೈಲು ನಿಲ್ದಾಣದ ಬಳಿ ಆರೋಪಿಯ ಕುರುಹು ಪತ್ತೆಯಾಗಿದೆ ಎನ್ನಲಾಗುತ್ತಿದೆ. ಆರೋಪಿಯ ಕೊನೆಯ ಬಾರಿಗೆ ರೈಲು ನಿಲ್ದಾಣ ಬಳಿ ಇದ್ದಂತಹ ಕುರುಹು ಇದೀಗ ಪತ್ತೆಯಾಗಿದೆ. ಕೃತ್ಯದ ಬಳಿಕ ಲೋಕಲ್ ಟ್ರೈನ್ ಮೂಲಕ ವಸಾಯಿ ವಿರಾರ್ ಕಡೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ವಸಾಯಿ, ನಲ್ಲಸೂಪರ ವಿರಾರ್ ಪ್ರದೇಶಗಳಲ್ಲಿ ಇದೀಗ ದುಷ್ಕರ್ಮಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಆರೋಪಿಯು ರಾತ್ರಿ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾನೆ. ಈ ವೇಳೆ ಸೈಫ್ ಅಲಿಖಾನ್ ಅವರಿಗೆ ಐದರಿಂದ ಆರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಅಲ್ಲಿಂದ ಎಕ್ಸಿಟ್ ಮೂಲಕ ಆರೋಪಿ ಪರಾರಿಯಾಗಿದ್ದಾನೆ. ಇದೀಗ ಆರೋಪಿಯ ಕುರುಹು ಪತ್ತೆಯಾಗಿದ್ದು ಪೊಲೀಸರು ಶೋಧ ಕಾರ್ಯ ಮತ್ತಷ್ಟು ತೀವ್ರಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಸೈಫ್ ಅಲಿ ಖಾನ್ ಗೆ ಇರಿದಿದ್ದ ಚಾಕುವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.