ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಈ ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದಂತ ವಿಚಾರಣೆ ನಡೆಸಿದ್ದಂತ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿತ್ತು.
ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸುವಂತೆ, ಹೆಚ್ಚಿನ ತನಿಖೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್, ವಿಚಾರಣೆ ಪೂರ್ಣಗೊಳಿಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ.
ಒಂದು ಕಡೆ ಕಾಂಗ್ರೆಸ್ ನಿಂದ, ಮತ್ತೊಂದು ಕಡೆ ಕಳ್ಳ ಖದೀಮರಿಂದ ಲೂಟಿ: ಛಲವಾದಿ ನಾರಾಯಣಸ್ವಾಮಿ ಕಿಡಿ
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat