ಬೀದರ್: ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ದುರಂತದಿಂದ ತೀವ್ರ ದುಃಖ ವ್ಯಕ್ತಪಡಿಸಿದ ಸಚಿವರು, ಗಿರಿ ವೆಂಕಟೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು ಮತ್ತು ಕುಟುಂಬಕ್ಕೆ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು.
ಮೃತರ ಕುಟುಂಬಕ್ಕಾಗಿ ಸಮಗ್ರ ಪರಿಹಾರ ಘೋಷಿಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ₹8 ಲಕ್ಷ ಪರಿಹಾರ ಮತ್ತು ಹೆಚ್ಚುವರಿಯಾಗಿ ಸರ್ಕಾರದಿಂದ ₹10 ಲಕ್ಷ ಪರಿಹಾರ, ಪಿಂಚಣಿ ಮತ್ತು ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ತಕ್ಷಣವಾಗಿ ಕುಟುಂಬಕ್ಕೆ ತಾತ್ಕಾಲಿಕ ಉದ್ಯೋಗ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದುರಂತಕ್ಕೆ ಕಾರಣವಾದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ತಿಳಿಸಿ, ಕುಟುಂಬದ ನೋವಿನಲ್ಲಿ ಸರ್ಕಾರ ಮತ್ತು ತಾವೂ ಕೂಡ ಸದಾ ಜೊತೆಯಲ್ಲಿರುವದಾಗಿ ಭರವಸೆ ನೀಡಿದರು.
BREAKING: ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಆದೇಶ
BREAKING:ದೆಹಲಿಯಲ್ಲಿ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೆ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ | Ayushman Bharat