ಬೀದರ್ : ಎಸ.ಬಿ.ಐ ಬ್ಯಾಂಕ್ ಎಟಿಎಂ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿದ್ದು, ಒಟ್ಟು 18 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು ಬದ್ಧವಾಗಿದ್ದು, ಸಮಾಜ ಕಲ್ಯಾಣ ಇಲಾಖೆಯಿಂದ ₹8 ಲಕ್ಷ ಪರಿಹಾರ ಮತ್ತು ಹೆಚ್ಚುವರಿಯಾಗಿ ₹10 ಲಕ್ಷ, ಪಿಂಚಣಿ ಹಾಗೂ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.
ಸದ್ಯಕ್ಕೆ, ತಾತ್ಕಾಲಿಕವಾಗಿ ಕುಟುಂಬದವರಿಗೆ ಉದ್ಯೋಗ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದುರಂತಕ್ಕೆ ಕಾರಣವಾದ ದುಷ್ಕರ್ಮಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ತಿಳಿಸಿ, ಕುಟುಂಬದ ನೋವಿನಲ್ಲಿ ಸರ್ಕಾರ ಮತ್ತು ತಾವೂ ಕೂಡ ಸದಾ ಜೊತೆಯಲ್ಲಿದ್ದೆವೆ ಎಂದು ಭರವಸೆ ನೀಡಿದ್ದಾರೆ.
ಎಸ.ಬಿ.ಐ ಬ್ಯಾಂಕ್ ಎಟಿಎಂ ದರೋಡೆ ದಾಳಿಯಲ್ಲಿ ಹತ್ಯೆಗೀಡಾದ ಭದ್ರತಾ ಸಿಬ್ಬಂದಿ ಗಿರಿ ವೆಂಕಟೇಶ್ ಅವರ ಬೇಮಳಖೇಡ್ ಮನೆಗೆ ಇಂದು ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಈ ದುರಂತದಿಂದ ತೀವ್ರ ದುಃಖ ವ್ಯಕ್ತಪಡಿಸುತ್ತಾ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದೆ.
ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಮಗ್ರ ಪರಿಹಾರ ಒದಗಿಸಲು… pic.twitter.com/iqRg3arpAL
— Eshwar Khandre (@eshwar_khandre) January 17, 2025
ಬೀದರ್ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೈದ್ರಾಬಾದ್ ನ ಕೇರ್ ಆಸ್ಪತ್ರೆಗೆ ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಭೇಟಿ ನೀಡಿ, ಬೀದರ್ ನಲ್ಲಿ ನಿನ್ನೆ ಎ.ಟಿ.ಎಂ. ದರೋಡೆ ವೇಳೆ ಗುಂಡೇಟಿನಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಶಿವಕುಮಾರ್ ಕುಟುಂಬದವರಿಗೆ ಧೈರ್ಯ ಹೇಳಿದ ಅವರು, ಶಿವಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ನಂತರ, ವೈದ್ಯರೊಂದಿಗೆ ಸಮಾಲೋಚಿಸಿದ ಸಚಿವರು ಎಲ್ಲ ಅಗತ್ಯ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು.