ತುಮಕೂರು : ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ತುಮಕೂರಿನಲ್ಲಿ ಪಿಯು ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿ ಬರುವಾಗ ಹೃದಯಾಘಾತದಿಂದ ಕಾಲೇಜಿನ ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಶಮಂತ್ (17) ಸಾವನ್ನಪ್ಪಿದ್ದಾನೆ.
ಗುರುವಾರ ಘಟನೆ ನಡೆದಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ನಡೆಸಿ ವಾಪಸ್ ಬರುವಾಗ ಎದೆ ನೋವಿನಿಂದ ಕುಸಿದು ಬಿದ್ದ ಶಮಂತ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.