ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ED ಅಧಿಕಾರಿಗಳಿಂದ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಪತ್ರಿಕ ಪ್ರಕಟಣೆ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 300 ಕೋಟಿ ಮೌಲ್ಯದ ಹಣ ಜಪ್ತಿ ಮಡಿಕೊಂಡಿದ್ದು, ಈ ಹಗರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು, ರಾಜಕೀಯ ನಾಯಕರು ಸೇರಿ ಬೇರೆ ಬೇರೆ ವ್ಯಕ್ತಿಗಳು ಬೇನಾಮಿ ನಿವೇಶನ ಪಡೆದುಕೊಂಡಿರುವ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಹಾಗಾಗಿ ಇದೀಗ ಯಾವುದೇ ಕ್ಷಣದಲ್ಲಾದರೂ ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.