ಬೀದರ್ : ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಯುವ ಗುತ್ತಿಗೆದಾರ ಸಚಿನ್ ಪಂಜಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿಐಡಿ ಅಧಿಕಾರಿಗಳು ರಾಜು ಕಪನೂರ್ & ಗ್ಯಾಂಗ್ ಅನ್ನು ಬೀದರ್ ನ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ರಾಮಾಮೂರ್ತಿ ಎಲ್ಲಾ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಿದ ಸಿಐಡಿ ಅಧಿಕಾರಿಗಳು ಆರೋಪಿಗಳಾದ ರಾಜು ಕಪನೂರ್ ಮತ್ತು ಗ್ಯಾಂಗ್ ಕೋರ್ಟಿಗೆ ಹಾಜರುಪಡಿಸಿದ್ದರು. ಬೀದರ್ ನ JMFC ಕೋರ್ಟಿಗೆ ಸೇಡಿ CID ಅಧಿಕಾರಿಗಳ ತಂಡ ಹಾಜರುಪಡಿಸಿದ್ದರು. ಇದೀಗ ನ್ಯಾಯಾಧೀಶರು ರಾಜು ಕಪನೂರ್ ಮತ್ತು ಗ್ಯಾಂಗ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆಗು ಮುನ್ನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಅವರ ಆಪ್ತ ರಾಜು ಸೇರಿದಂತೆ ಹಲವರ ಹೆಸರು ಉಲ್ಲೇಖಿಸಿದ್ದ ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರ ಆಪ್ತ ರಾಜುಗೆ ಅರೆಸ್ಟ್ ಮಾಡಿದರು. ಇದೀಗ ಬೀದರ್ ನ JMFC ನ್ಯಾಯಾಲಯ ಕೂಡ ರಾಜು ಕಪ್ನೂರು ಸೇರಿ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ