Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SBI Customers : ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?

28/03/2026 8:00 PM

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಅಬಕಾರಿ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಹೊಸ ನಿಯಮ ಜಾರಿ
KARNATAKA

ರಾಜ್ಯದ ಅಬಕಾರಿ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆಗೆ ಹೊಸ ನಿಯಮ ಜಾರಿ

By kannadanewsnow0919/01/2025 7:52 AM

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM2 Mins Read

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM2 Mins Read

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM1 Min Read
Recent News

SBI Customers : ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?

28/03/2026 8:00 PM

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

28/03/2026 7:36 PM

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM
RCB vs SRH IPL 2026 Rajat Patidar vs Ishan Kishan Leadership Clash

ಬ್ರೇಕಿಂಗ್‌ : ಚಿನ್ನಸ್ವಾಮಿಯಲ್ಲಿ ಹೈ-ವೋಲ್ಟೇಜ್ ಕದನ; ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ!

28/03/2026 7:10 PM
State News
KARNATAKA

KSRTCಯ ‘ಪಾರದರ್ಶಕ ನೇಮಕಾತಿ’ಗೆ ಪ್ರತಿಷ್ಠಿತ ರಾಷ್ಟ್ರೀಯ ‘ಸ್ಕಾಚ್’ ಪ್ರಶಸ್ತಿ ಗರಿ!

By kannadanewsnow0928/03/2026 7:36 PM KARNATAKA 2 Mins Read

ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ತನ್ನ ಆಡಳಿತಾತ್ಮಕ ಸುಧಾರಣೆ ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕ ನೇಮಕಾತಿ…

ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗಾಗಿ 450 ಹಾಸಿಗೆಯ ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ ನಿರ್ಮಾಣ: ಸಚಿವ ಶರಣಪ್ರಕಾಶ್‌ ಪಾಟೀಲ್‌

28/03/2026 7:33 PM

ಯುವಜನರ ಪಾಲಿಗೆ ಆಪದ್ಬಾಂಧವನಾದ ‘ಸ್ವಾವಲಂಬಿ ಸಾರಥಿ’: 6,942 ವಾಹನ ವಿತರಣೆಗೆ ಸಿಎಂ ಸಿದ್ದರಾಮಯ್ಯ ಗುರಿ!

28/03/2026 6:23 PM

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

28/03/2026 6:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.