Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟಕ್ಕೆ ಬಿಜೆಪಿಯ ಆಡಳಿತವೇ ಮೂಲ ಕಾರಣ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

30/04/2026 9:49 PM

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ

30/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದಿನ ದಿನಗಳಲ್ಲಿ ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಅಗತ್ಯ: ‘ಊಹಾ (ಕಲ್ಪಿತ)’ ಪತ್ರಿಕೋದ್ಯಮ ಅಪಾಯಕಾರಿ : CM ಸಿದ್ದರಾಮಯ್ಯ
KARNATAKA

ಇಂದಿನ ದಿನಗಳಲ್ಲಿ ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಅಗತ್ಯ: ‘ಊಹಾ (ಕಲ್ಪಿತ)’ ಪತ್ರಿಕೋದ್ಯಮ ಅಪಾಯಕಾರಿ : CM ಸಿದ್ದರಾಮಯ್ಯ

By kannadanewsnow0518/01/2025 3:45 PM

ತುಮಕೂರು :ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಕಪೋಲಕಲ್ಪಿತ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ಸ್ವಾತಂತ್ರ್ಯಕ್ಕೂ ಮುನ್ನ ಇಂದಿನ ಪತ್ರಿಕೋದ್ಯಮ ಹೋಲಿಸುವುದು ಉತ್ತಮ. ವಿಜ್ಞಾನ ಬೆಳವಣಿಗೆ ಆದಂತಲ್ಲ ಮಾಧ್ಯಮ ಕೂಡ ಬೆಳವಣಿಗೆ ಕಾಣುತ್ತಿದೆ. ಅಮೇರಿಕಾದಲ್ಲಿ ಬೆಂಕಿ ಬಿದ್ದರೆ ತಕ್ಷಣ ಇಲ್ಲಿ ಸುದ್ದಿ ಬರುತ್ತದೆ. ಯಾವುದೇ ದೇಶದಲ್ಲಿ ಪತ್ರಿಕೋದ್ಯಮ ವೃತ್ತಿಯಾಗಿಯೇ ಉಳಿಯಬೇಕು.ಕೆಲ ವರ್ಷಗಳಿಂದ ಇದು ಉದ್ಯಮವಾಗಿಬಿಟ್ಟಿದೆ. ವೃತ್ತಿಯಾಗಿದ್ದಾಗ ದೇಶದ ಹಿತ ಸಮಾಜದ ಹಿತ ಮುಖ್ಯವಾಗಿತ್ತು. ಉದ್ಯಮವಾದಾಗ ಅದ್ಯಾವುದು ಮುಖ್ಯವಾಗುವುದಿಲ್ಲ.ಸಂವಿಧಾನ ಆಶಯ ಈಡೇರಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯ ಗಟ್ಟಿಯಾಗಿರಬೇಕು.

ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಆ ಸರ್ಕಾರದ ಉದ್ದೇಶ ಸಂವಿಧಾನದ ಆಶಯಗಳನ್ನು ಉಳಿಸಿಕೊಳ್ಳುವುದಾಗಿರಬೇಕು. ಯಾವುದೇ ಸರ್ಕಾರ ಸಂವಿಧಾನದ ಆಶಯಗಳನ್ನು ಉಳಿಸಿಕೊಂಡಿಲ್ಲ ಅಂದರೆ ಗಾಂಧಿ ಬುದ್ಧ ಅಂಬೇಡ್ಕರ್ ಅವರು ಹೇಳಿದ್ದನ್ನು ಪಾಲಿಸಲು ಆಗುತ್ತಾ? ವಸ್ತುಸ್ಥಿತಿ ಜೊತೆಗೆ ಮೌಲ್ಯಯುತ ಸುದ್ದಿ ಜನರಿಗೆ ತಲುಪುವ ಕೆಲಸ ಆಗಬೇಕು ಎಂದು ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು, ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.

ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು. ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.ಈ ಇಂದು ಸಮ್ಮೇಳನದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾದ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆ.ವಿ.ಪ್ರಭಾಕರ್ ಅವರಿಗೆ ಅಭಿನಂಧಿಸಿದ ಸಮ್ಮೇಳನ

ರಾಜ್ಯದ ಪತ್ರಕರ್ತ ಸಮುದಾಯದ ವೃತ್ತಿಪರ ಸಮಸ್ಯೆಗಳಿಗೆ ಅತ್ಯಂತ ಸಹೃದಯತೆಯಿಂದ ಸ್ಪಂದಿಸಿ, ಪರಿಹಾರ ಒದಗಿಸಿಕೊಡುತ್ತಿರುವುದರ ಜೊತೆಗೆ ಸಮ್ಮೇಳನದ ಯಶಸ್ಸಿಗೆ ಸಕಲ ರೀತಿಯಲ್ಲಿ ಸಂಪೂರ್ಣ ಸಹಕಾರ ನೀಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಸಮ್ಮೇಳನ ವಿಶೇಷ ಅಭಿನಂದನೆ ಸಲ್ಲಿಸಿತು.

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM2 Mins Read

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟಕ್ಕೆ ಬಿಜೆಪಿಯ ಆಡಳಿತವೇ ಮೂಲ ಕಾರಣ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

30/04/2026 9:49 PM2 Mins Read

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ

30/04/2026 9:30 PM1 Min Read
Recent News

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟಕ್ಕೆ ಬಿಜೆಪಿಯ ಆಡಳಿತವೇ ಮೂಲ ಕಾರಣ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

30/04/2026 9:49 PM

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ

30/04/2026 9:30 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿವೆ ಓದಿ! Karnataka Cabinet Meeting

30/04/2026 9:05 PM
State News
KARNATAKA

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

By kannadanewsnow0930/04/2026 11:02 PM KARNATAKA 2 Mins Read

ಶಿವಮೊಗ್ಗ: ಸಾಗರದ ಚಿಗುರು ಜಂಬೋಕಿಡ್ಸ್ ಸಂಸ್ಥೆಯು ಆಯೋಜಿಸಿದ್ದ ಒಂದು ತಿಂಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಗುರುವಾರ ಸಂಜೆ ಅತ್ಯಂತ…

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟಕ್ಕೆ ಬಿಜೆಪಿಯ ಆಡಳಿತವೇ ಮೂಲ ಕಾರಣ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

30/04/2026 9:49 PM

ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ

30/04/2026 9:30 PM

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿವೆ ಓದಿ! Karnataka Cabinet Meeting

30/04/2026 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.