ಬೆಂಗಳೂರು: ಕೆಲ ದಿನಗಳಿಂದ ಮಳೆರಾಯ ಕೊಂಚ ಬಿಡುವು ಪಡೆದುಕೊಂಡಿತ್ತು. ನಂತರ ನಗರದಲ್ಲಿ ವಿಪರೀತ ಚಳಿ ಶುರುವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಈ ನಡುವೆ ಇಂದು ಬೆಳ್ಳಂಬೆಳಗ್ಗೆ ನಗರದ ಹಲವಡೆ ತುಂತುರು ಮಳೆಯಾಗುತ್ತಿದೆ.
ಬೆಂಗಳೂರಿನ ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವಡೆ ತುಂತುರು ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ.
ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ ತೊಂದರೆ ಆಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.