ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಬಿಎಂಟಿಸಿ ಬಸ್ ವೊಂದು ಬ್ರೇಕ್ ಫೇಲ್ ರಸ್ತೆ ಬದಿಯ ಡಾಬಾ, ಅಂಗಡಿಗೆ ನುಗ್ಗಿರುವ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ಬೆಂಗಳೂರಿನ ನಾಗದೇವನಹಳ್ಳಿಯ ರಸ್ತೆಯಲ್ಲಿ ಬಿಎಂಟಿಸಿ ಬಸ್ ವೊಂದು ರಸ್ತೆ ಪಕ್ಕದ ಡಾಬಾ, ಅಂಗಡಿಗೆ ನುಗ್ಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಶಿರ್ಕೆ ಸರ್ಕಲ್ ನಿಂದ ನಾಗರಬಾವಿ ಕಡೆಗೆ ಹೊರಟಿತ್ತು. ಈ ವೇಳೆ ಬ್ರೇಕ್ ಫೇಲ್ ಆಗಿ ಬಸ್ ಡಾಬಾ ಅಂಗಡಿಗೆ ನುಗ್ಗಿದೆ.
ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದೆ. ಅಪಘಾತದಿಂದ ಬಸ್ ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.