ಗದಗ : ತುಂಗಭದ್ರಾ ನದಿ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ನದಿ ನೀರಿನ ಮಾದರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಈ ನೀರು ಸದ್ಯ ಕುಡಿಯಲು ಯೋಗ್ಯವಿಲ್ಲವೆಂದು ಪ್ರಾಥಮಿಕ ವರದಿ ತಿಳಿಸಿದೆ.
ತುಂಗಭದ್ರಾ ನದಿ ನೀರು ಹಸಿರು ಬಣ್ಣಕ್ಕೆ ತಿರುಗಲು ಕಾರಣವಾಗಿರುವ ಅಂಶ ಪತ್ತೆ ಹಚ್ಚಲು ನದಿ ನೀರಿನ ಮಾದರಿಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯವರು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ನೀರು ಕುಡಿಯಲು ಯೋಗ್ಯ ಅಲ್ಲ ಎಂದು ವರದಿಯಲ್ಲಿ ತಿಳಿದುಬಂದಿದೆ.
ನದಿ ನೀರು ಹಸಿರು ಬಣ್ಣಕ್ಕೆ ತಿರುಗಲು ಕಾರಣವಾಗಿರುವ ಬಗ್ಗೆ ವೈಜ್ಞಾನಿಕ ಅಂಶ ಪರಿಶೀಲಿಸಲು ಸಹ ಸೂಕ್ತ ಕ್ರಮ ಕೈಗೊಳ್ಳಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಈ ನೀರನ್ನು ಉಪಯೋಗಿಸದಂತೆ ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.