ನವದೆಹಲಿ: 2018ರಲ್ಲಿ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಜನವರಿ 20 ರಂದು ತಡೆ ನೀಡಿದೆ.
ವಿಚಾರಣಾ ನ್ಯಾಯಾಲಯವು ತನಗೆ ನೀಡಿದ ಸಮನ್ಸ್ ಅನ್ನು ರದ್ದುಗೊಳಿಸಲು ನಿರಾಕರಿಸಿದ ಜಾರ್ಖಂಡ್ ಹೈಕೋರ್ಟ್ನ ಫೆಬ್ರವರಿ 2024 ರ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಮತ್ತು ದೂರುದಾರ ನವೀನ್ ಝಾ ಅವರಿಗೆ ನೋಟಿಸ್ ನೀಡಿದೆ.
2019 ರ ಲೋಕಸಭಾ ಚುನಾವಣೆಗೆ ಮೊದಲು ಚೈಬಾಸಾದಲ್ಲಿ ಮಾಡಿದ ಸಾರ್ವಜನಿಕ ಭಾಷಣವೊಂದರಲ್ಲಿ, ರಾಹುಲ್ ಗಾಂಧಿ ಶಾ ಅವರನ್ನು “ಕೊಲೆಗಾರ” ಎಂದು ಉಲ್ಲೇಖಿಸಿದ್ದರು ಎಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತ ನವೀನ್ ಝಾ 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದರು.