ಹಾಸನ : ನಿಯಮ ಉಲ್ಲಂಘನೆ ಮಾಡಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಘಟನೆ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗವಿಗುಡ್ಡದಲ್ಲಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಕಾಂತಾರ-2 ಸಿನಿಮಾ ಚಿತ್ರೀಕರಣ ಮಾಡುತ್ತಿದ್ದು, ಸದ್ಯ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಹೌದು ಕಾಂತಾರ-2 ಸಿನೆಮಾ ಚಿತ್ರೀಕರಣ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಇದೀಗ ಭೇಟಿ ನೀಡಿದ್ದಾರೆ. ACF ಮಧು ಹಾಗೂ RFO ಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಶೂಟಿಂಗ್ ಮಾಡಲು ಅನುಮತಿ ನೀಡಿದ ಸ್ಥಳವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಒಂದು ಚಲನಚಿತ್ರದ ಚಿತ್ರೀಕರಣದಲ್ಲಿ 1000ಕ್ಕೂ ಅಧಿಕ ಜನರು ಭಾಗವಹಿಸುತ್ತಿದ್ದಾರೆ.ಕಳೆದ 10 ದಿನಗಳಿಂದ ಕಾಂತಾರ 2 ಶೂಟಿಂಗ್ ನಡೆಯುತ್ತಿದೆ. ಆದರೆ ಅಕ್ರಮವಾಗಿ ನಿಯಮ ಉಲ್ಲಂಘಿಸಿ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡುತ್ತಿರುವ ಆರೋಪ ಕೇಳಿ ಬಂದಿದೆ ಹಾಗಾಗಿ ಇದೀಗ ಅರಣ್ಯ ಅಧಿಕಾರಿಗಳು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.