ಹುಬ್ಬಳ್ಳಿ : ರಾಜ್ಯದಲ್ಲಿ ಸಾಲು ಸಾಲು ಬ್ಯಾಂಕ್ ದರೋಡೆಗಳ ಪ್ರಕರಣಗಳ ನಡೆದಿದ್ದು, ಕಳೆದ ಹಲವು ದಿನಗಳ ಹಿಂದೆ ಬೀದರ್, ಮಂಗಳೂರಿನಲ್ಲಿ ನಡೆದ ದರೋಡೆ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅಲ್ಲದೆ ಇಂದು ಬೆಳಿಗ್ಗೆ ಕೂಡ ಮೈಸೂರಿನಲ್ಲಿ ಕೇರಳ ಮೂಲದ ಉದ್ಯಮಿಯ ಕಾರು ಹಾಗೂ ಹಣದ ಜೊತೆಗೆ ದರೋಡೆ ಮಾಡಿದ ಘಟನೆ ನಡೆದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ಕೂಡ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.
ಹೌದು ಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನವನಗರದಲ್ಲಿರುವ ಕೆನರಾ ಬ್ಯಾಂಕಿಗೆ ಕನ್ನ ಹಾಕಲು ಖದೀಮರು ಯತ್ನಿಸಿರುವ ಘಟನೆ ವರದಿಯಾಗಿದೆ. ಹುಬ್ಬಳ್ಳಿಯ ಎಪಿಎಂಸಿ ಆವರಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಗೆ ದರೋಡೆಗೆ ಯತ್ನಿಸಿದ್ದಾರೆ. ಬ್ಯಾಂಕಿನ ಶೇಟರ್ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ದರೋಡೆಗೆ ಯತ್ನಿಸಿದ ಕಳ್ಳರಿಗಾಗಿ ಇದೀಗ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.