ಬೆಂಗಳೂರು: ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ಎನ್ನುವಂತೆ ಚಿತ್ರತಂಡ ಷರತ್ತು ಉಲ್ಲಂಘನೆಯ ಬಗ್ಗೆ ಪರಿಶೀಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಒಂದು ವೇಳೆ ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿಯಾಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆಯೂ ಖಡಕ್ ಆದೇಶ ಮಾಡಿದ್ದಾರೆ.
ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತ ಬಳಿ ಇರುವ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಿ.03.01.2025 ರಿಂದ 15.01.2025 ರವರೆಗೆ ತಾತ್ಕಾಲಿಕ ಸೆಟ್ ನಿರ್ಮಾಣ ಮಾಡಿಕೊಳ್ಳಲು ಹಾಗೂ ದಿ.15.01.2025 ರಿಂದ 25.01.2025 ರವರೆಗೆ ಒಟ್ಟು 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣಕ್ಕೆ ಷರತ್ತುಬದ್ಧ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ಕಾಂತಾರಾ ತಂಡ ಕಾಡಿನಂಚಿನ ಪರಿಭಾವಿತ ಅರಣ್ಯ ಪ್ರದೇಶದ ಬಳಿ ನಡೆಸುತ್ತಿರುವ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ ಎಂಬುದಾಗಿ ಹೇಳಿದ್ದಾರೆ.
ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಈ ಮೂಲಕ ಸೂಚಿಸಿದ್ದಾರೆ. ಈ ಮೂಲಕ ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ಶಾಕ್ ನೀಡಿದ್ದಾರೆ.
BREAKING: ಬೆಚ್ಬಿ ಬಿದ್ದ ಬಳ್ಳಾರಿ ಜನತೆ: ‘KMF ಕಚೇರಿ’ ಮುಂದೆಯೇ ವಾಮಾಚಾರ
ಟ್ರಂಪ್ ಹೊಸ ಕ್ರಿಪ್ಟೋಕರೆನ್ಸಿಯ ನಂತರ ಮೆಲಾನಿಯಾ ಮೆಮೆ ನಾಣ್ಯ ಬಿಡುಗಡೆ | Melania Meme Coin