ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿ ಇರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಅಮಾನವೀಯವಾಗಿದೆ. ತಪ್ಪಿತಸ್ಥರನ್ನು ಬಂಧಿಸಿದ್ದು, ಕಠಿಣ ಕಾನೂನು ಕ್ರಮವನ್ನೂ ಜರುಗಿಸಲಾಗುವುದು. ಈಗಾಗಲೇ ಆರೋಪಿಗಳನ್ನು ಬಂಧಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಘಟನೆಯ ಬಗ್ಗೆ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ವಿಧಾನಸೌಧದಲ್ಲಿ ಸೋಮವಾರ ಉತ್ತರಿಸಿದ್ದಾರೆ.
ಇಟ್ಟಿಗೆ ಭಟ್ಟಿಯಲ್ಲಿ ನಡೆದಿರುವ ಘಟನೆ ಬಗ್ಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠರ ಜತೆ ಮಾತನಾಡಿ, ಸೂಕ್ತ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಅಲ್ಲಿನ ಜಿಲ್ಲಾಧಿಕಾರಿಗಳು ಕರ್ತವ್ಯದ ಮೇಲೆ ಬೆಂಗಳೂರಿನಲ್ಲೇ ಇದ್ದಾರೆ. ಅವರೊಂದಿಗೂ ಈ ಬಗ್ಗೆ ಮಾತನಾಡಿರುವೆ. ತಪ್ಪಿತಸ್ಥರನ್ನು ಹಾಗೆಯೇ ಬಿಡುವ ಪ್ರಶ್ನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಂದಹಾಗೇ ಇಟ್ಟಿಗೆ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣದಡಿ ಇಟ್ಟಿಕೆ ಕಾರ್ಖಾನೆಯ ಮಾಲೀಕ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಅಲೆಮಾರಿ/ಅರೆಅಲೆಮಾರಿ ನಾಮ ನಿರ್ದೇಶಿತ ಸದಸ್ಯರ ಆಯ್ಕೆಗಾಗಿ ಅರ್ಜಿ ಆಹ್ವಾನ
KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ