ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾರೀ ಕಾಡ್ಗಿಚ್ಚು ಉಂಟಾಗಿದೆ. ಪರಿಸರ ಸೂಕ್ಷ್ಮ ವಲಯವಾಗಿರುವಂತ ಚಿಕ್ಕಮಗಳೂರಿನ ಪಶ್ಚಿಮಘಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಕಾಡು ಹೊತ್ತು ಉರಿಯುತ್ತಿದೆ.
ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿಯಲ್ಲಿ ಬಿದುರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇಲ್ಲಿಂದ ಆರಂಭಗೊಂಡಂತ ಬೆಂಕಿ, ಕಾಡಿನ ಇತರೆ ಭಾಗಕ್ಕೂ ವ್ಯಾಪ್ಸಿದೆ. ನೂರಾರು ಎಕರೆ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಕಾಡ್ಗಿಚ್ಚು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಂದಿಸಲು ಹರಸಾಹಸ ಪಡುವಂತೆ ಆಗಿದೆ. ಇದೀಗ ಸ್ಥಳದಲ್ಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಬೆಂಕಿ ನಂದಿಸಲು ನೆರವಾಗುತ್ತಿದ್ದಾರೆ.
ವಿಜಯಪುರದಲ್ಲಿ ಇಟ್ಟಿಗೆ ಕಾರ್ಮಿಕರ ಮೇಲೆ ಹಲ್ಲೆ ಕೇಸ್: ಐವರು ಆರೋಪಿಗಳ ಬಂಧನ
KSOUದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದವರಿಗೆ ಮಹತ್ವದ ಮಾಹಿತಿ