Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

ಜೂನ್ನಲ್ಲಿ ಭಾರತದಲ್ಲಿ ಫ್ರೆಶರ್ ನೇಮಕಾತಿ ಶೇ.11ರಷ್ಟು ಏರಿಕೆ: ವರದಿ

03/07/2025 9:14 AM

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ: ಸಿಎಂ ಸಿದ್ಧರಾಮಯ್ಯ
KARNATAKA

ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ: ಸಿಎಂ ಸಿದ್ಧರಾಮಯ್ಯ

By kannadanewsnow0920/01/2025 9:27 PM

ಬೆಳಗಾವಿ : ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ ಎಂದರು.

ಶತಮಾನೋತ್ಸವದ ಸ್ಮರಣಾರ್ಥ ಸಮಾವೇಶ

ಬೆಳಗಾವಿಗೆ ಕೊಡುಗೆ ಘೋಷಣೆ ಮಾಡುವ ಸಮಾವೇಶ ಅಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಇದು ನೂರು ವರ್ಷಗಳ ಹಿಂದೆ ನಡೆದಿದ್ದ ಅಧಿವೇಶನದ ಜ್ಞಾಪಕಾರ್ಥವಾಗಿ ನಡೆಯುತ್ತಿರುವ ಕಾರ್ಯಕ್ರಮ ಎಂದರು.

ಬೆಳಗಾವಿಯಲ್ಲಿ ನಾಳೆ ಒಂದು ಗಂಟೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದ್ದು, ಈ ಸಮಾವೇಶ ಕಳೆದ ಡಿಸೆಂಬರ್ 27 ರಂದು ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು ಎಂದು ವಿವರಿಸಿದರು.

ಪ್ರಹ್ಲಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ

ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಹ್ಲಾದ್ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ ಎಂದು ಪ್ರಶ್ನಿಸಿದರು.

ಪಕ್ಷದ ವತಿಯಿಂದ ಸಮಾವೇಶ

ಸಮಾವೇಶವನ್ನು ಪಕ್ಷದ ವತಿಯಿಂದ ಕೈಗೊಂಡಿದ್ದು, ಪ್ರತಿಮೆ ಅನಾವರಣವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಗಳು ಸ್ಪಷ್ಟಪಡಿಸಿದರು.

ಯತ್ನಾಳ್ ಇತಿಹಾಸ ಓದಿಕೊಂಡಿಲ್ಲ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರವಿದೆ ಎಂದಿರುವ ಬಗ್ಗೆ ಮಾತನಾಡಿ ಅವರಿಗೆ ಇತಿಹಾಸ ತಿಳಿದಿಲ್ಲ ಹಾಗೂ ಅದನ್ನು ಓದಿಯೂ ಇಲ್ಲ ಎಂದರು. ಅದಕ್ಕಾಗಿಯೇ ಅಂಬೇಡ್ಕರ್ ಅವರು ಇತಿಹಾಸ ಗೊತ್ತಿಲ್ಲದವರು ಭವಿಷ್ಯವನ್ನು ಸೃಷ್ಟಿಸಲಾರರು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಾತ್ಮಾ ಗಾಂಧಿ ಅವರನ್ನು ಗೋಡ್ಸೆ ಕೊಂದಿದ್ದು, ಆತನ ಜೊತೆ ಸಾವರ್ಕರ್ ಕೂಡ ಶಾಮೀಲಾಗಿರುವ ಬಗ್ಗೆ ಪ್ರಕರಣವಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

BREAKING: ಚಿಕ್ಕಮಗಳೂರಲ್ಲಿ ಭಾರೀ ಕಾಡ್ಗಿಚ್ಚು: ಹೊತ್ತಿ ಉರಿಯುತ್ತಿರುವ ಪಶ್ಚಿಮಘಟ್ಟ

ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್

Share. Facebook Twitter LinkedIn WhatsApp Email

Related Posts

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM1 Min Read

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM2 Mins Read

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM3 Mins Read
Recent News

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

ಜೂನ್ನಲ್ಲಿ ಭಾರತದಲ್ಲಿ ಫ್ರೆಶರ್ ನೇಮಕಾತಿ ಶೇ.11ರಷ್ಟು ಏರಿಕೆ: ವರದಿ

03/07/2025 9:14 AM

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM

SHOCKING : `ಹೃದಯಾಘಾತ’ದಿಂದ ಕುಸಿದು ಬಿದ್ದ ವೃದ್ಧನಿಗೆ `CPR’ ನೀಡಿ ಜೀವ ಉಳಿಸಿದ ವೈದ್ಯ : ವಿಡಿಯೋ ವೈರಲ್ | WATCH VIDEO

03/07/2025 9:06 AM
State News
KARNATAKA

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

By kannadanewsnow5703/07/2025 9:15 AM KARNATAKA 1 Min Read

ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.