ಬೆಳಗಾವಿ : ಗಾಂಧಿ ಭಾರತ ಸಮಾವೇಶದ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ 21-01-2025 ಬೆಳಗ್ಗೆ 10.30ಗಂಟೆಗೆ ಮಹತ್ಮಾ ಗಾಂಧೀಜಿ ಅವರ ಪುತ್ತಳಿ ಅನಾವರಣ ಸಮಾರಂಭವನ್ನು ಆಯೋಜಿಸಲಾಗಿರುತ್ತದೆ ಪ್ರಯುಕ್ತ ಸದರಿ ಕಾರ್ಯಕ್ರಮಗಳಲ್ಲಿ ಗಣಾ ಮಾನ್ಯರು, ಸ್ವಾತಂತ್ರ ಹೋರಾಟಗಾರರು ಸಾರ್ವಜನಿಕರು, ಮಹಿಳೆಯರು ಹಾಗೂ ವೈದ್ಯರು ಹೀಗೆ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (22) 2023 50 163 2 ( & ) ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಬೆಳಗಾವಿ ತಾಲೂಕಿನ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲಾ, ಅಂಗನವಾಡಿಗಳಿಗೆ ದಿನಾಂಕ:21.01.2025 ರಂದು ರಜೆ ಘೋಷಿಸುವುದು ಅವಶ್ಯವಿರುವುದರಿಂದ ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.
ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಬೆಳಗಾವಿ ಜಿಲ್ಲೆಯ ಜಿಲ್ಲಾ ದಂಡಾಧಿಕಾರಿಯಾದ ನಾನು ಮೊಹಮ್ಮದ ರೋಷನ್ ಭಾ.ಆ.ಸೇ, ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ದಿನಾಂಕ:21-01-2025 ರಂದು ಬೆಳಿಗೆ, 10.30 ಗಂಟೆಗೆ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭದ ಪ್ರಯುಕ್ತ ಸದರಿ ಕಾರ್ಯಕ್ರಮಗಳಲ್ಲಿ ಗಣ್ಯ ಮಾನ್ಯರು, ಸ್ನಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಹೀಗೆ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯ (ನಗರ & ಗ್ರಾಮೀಣ)ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಬೆಳಗಾವಿ ತಾಲೂಕಿನ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲಾ ಅಂಗನವಾಡಿಗಳಿಗೆ ದಿನಾಂಕ:21.01.2025 ರಂದು ರಜೆ ಘೋಷಿಸಿ ಆದೇಶಿಸಿದೆ.
ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ(ದ) ರವರು ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಳಗಾವಿ ರವರು ಈ ಆ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು.