ಬೆಳಗಾವಿ : ಬೆಂಗಳೂರಿನಲ್ಲಿ ಬಸ್ ಗೈಡ್ ಕಾಯುತ್ತಿದ್ದ ಮಹಿಳೆಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸಮಾಜಘಾತಕ ವ್ಯಕ್ತಿಗಳಿಂದ ಇಂತಹ ಕೃತ್ಯ ನಡೆಯುತ್ತವೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಾಜಘಾತುಕ ಶಕ್ತಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚಿ ಪೊಲೀಸರು ಬಂಧಿಸುತ್ತಾರೆ. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಪಕ್ಷದಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಕುರಿತು ಗಾಂಧಿ ತತ್ವಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈ ಒಂದು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗಾಂಧಿ, ಬಸವಣ್ಣ, ಅಂಬೇಡ್ಕರ್ ಹಾಗೂ ಕನಕದಾಸರ ತತ್ವ ಪಾಲಿಸಬೇಕು. ಸಂವಿಧಾನವನ್ನು ವಿರೋಧಿಸುವ ಕೆಲಸಗಳು ನಡೆಯುತ್ತಿವೆ.ಹೀಗಾಗಿ ಗಾಂಧಿ ತತ್ವ ಆದರ್ಶಗಳನ್ನು ಪುನರ್ ಸ್ಥಾಪಿಸಬೇಕಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಘಟನೆ ಹಿನ್ನೆಲೆ
ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯದ ಮಾಹಿತಿಯ ಪ್ರಕಾರ ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.