ಗದಗ: ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಉದ್ಯೋಗ ನೇಮಕಾತಿಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಗಜೇಂದ್ರಗಡದಲ್ಲಿ ನಡೆದ ಗದಗ ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯೋಗ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಮಾದರಿಯಲ್ಲಿಯೇ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಮಹತ್ವದ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಹಲವಾರು ಕವಿಗಳ ಪುಸ್ತಕಗಳನ್ನು ಇದೇ ವೇಳೆ ಲೋಕಾರ್ಪಣೆಗೊಳಿಸಿದೆವು. ಕನ್ನಡ ನುಡಿಯನ್ನು ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳು ಅಗತ್ಯ ಎಂಬ ಮಾತುಗಳನ್ನು ತಿಳಿಸಿದೆವು.