ಬೆಂಗಳೂರು: ಜನವರಿ 26, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಜನವರಿ.26, 2025ರಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.?
- ಗೃಹ ಸಚಿವ ಡಾ.ಜಿ ಪರಮೇಶ್ವರ್ – ತುಮಕೂರು
- ಕಾನೂನು ಸಚಿವ ಹೆಚ್.ಕೆ ಪಾಟೀಲ್ – ಗದಗ
- ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – ರಾಮನಗರ
- ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ – ವಿಜಯಪುರ
- ಇಂಧನ ಸಚಿವ ಕೆ.ಜೆ ಜಾರ್ಜ್ – ಚಿಕ್ಕಮಗಳಊರು
- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
- ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – ಮೈಸೂರು
- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – ಬೆಳಗಾವಿ
- ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – ಕಲಬುರ್ಗಿ
- ಜವಳಿ ಸಚಿವ ಶಿವಾನಂದ ಪಾಟೀಲ್ – ಹಾವೇರಿ
- ವಸತಿ ಸಚಿವ ಜಮೀರ್ ಅಹ್ಮದ್ – ವಿಜಯನಗರ
- ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ – ಯಾದಗಿರಿ
- ಅರಣ್ಯ ಸಚಿವ ಈಶ್ವರ್ ಖಂಡ್ರೆ – ಬೀದರ್
- ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ – ಮಂಡ್ಯ
- ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
- ಕಾರ್ಮಿಕ ಸಚಿವ ಸಂತೋಷ್ ಲಾಡ್ – ಧಾರವಾಡ
- ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ – ರಾಯಚೂರು
- ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ – ಬಾಗಲಕೋಟೆ
- ಪಶು ಸಂಗೋಪನ ಸಚಿವ ಕೆ.ವೆಂಕಟೇಶ್ – ಚಾಮರಾಜನಗರ
- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡರಗಿ – ಕೊಪ್ಪಳ
- ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – ಚಿತ್ರದುರ್ಗ
- ಕಂದಾಯ ಸಚಿವ ಕೃಷ್ಣಭೈರೇಗೌಡ – ಉಡುಪಿ
- ಸಹಕಾರ ಸಚಿವ ಎನ್ ರಾಜಣ್ಣ – ಹಾಸನ
- ನಗರಾಭಿವೃದ್ಧಿ ಸಚಿವ ಬಿಎಸ್ ಸುರೇಶ್ – ಕೋಲಾರ
- ಪೌರಾಡಳಿತ ಸಚಿವ ರಹೀಂ ಖಾನ್ – ಬಳ್ಳಾರಿ
- ಮೀನುಗಾರಿಕಾ ಸಚಿವ ಮಂಕಾಳ ವೈದ್ಯ – ಉತ್ತರ ಕನ್ನಡ
- ಶಿಕ್ಷಣ ಸಚಿವ ಮಧು ಬಂಗಾರಪ್ಪ – ಶಿವಮೊಗ್ಗ
- ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ – ಚಿಕ್ಕಬಳ್ಳಾಪುರ
- ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು – ಕೊಡಗು
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು