ಬೆಳಗಾವಿ : ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆ ಆಗಿ ಕೆಲಸ ಮಾಡುತ್ತಿದೆ. ಇವರ ಸಿದ್ಧಾಂತ ಒಡಕು ಮೂಡಿಸುವುದೇ ಆಗಿದೆ. ಬಾಪೂಜಿ ಆರ್‌ಎಸ್‌ಎಸ್ ಸಿದ್ಧಾಂತ ವಿರೋಧಿಸುತ್ತಿದ್ದರು. ಅಲ್ಲದೇ ಅಂಬೇಡ್ಕರ್ ಸಂವಿಧಾನವನ್ನು ಕೂಡ ಬಿಜೆಪಿ RSS ವಿರೋಧಿಸುತ್ತಿದ್ದರು. ಬಿಜೆಪಿ ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡಬೇಕು. ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಈ ಒಂದು ಕರ್ತವ್ಯ ಇದೆ. ಎಂದು ಸಿಎಂ ಸಿದ್ದರಾಮಯ್ಯ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರತ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಆರ್ ಎಸ್ ಎಸ್ ನ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ.ದೇಶದಲ್ಲಿ ಒಡಕು ಮೂಡಿಸುವುದೇ ಬಿಜೆಪಿ ಮತ್ತು ಆರ್ ಎಸ್ ಎಸ್ ಸಿದ್ದಾಂತವಾಗಿದೆ. ಹಾಗಾಗಿ ಇಂತವರ ವಿರುದ್ಧ ಹೋರಾಟ ಮಾಡಬೇಕಾದ ಕರ್ತವ್ಯ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ ಎಂದು ತಿಳಿಸಿದರು.
ನಮ್ಮ ಎಲ್ಲಾ ಕಾರ್ಯಕರ್ತರ ಮುಂದೆ ಹಲವಾರು ಸವಾಲುಗಳಿವೆ. ಭಾರತದ ಬಹುತ್ವದ ದೇಶ ಇಲ್ಲಿ ಅನೇಕ ಧರ್ಮಗಳು ಹಾಗೂ ಜಾತಿಗಳಿವೆ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವುದು ಅತ್ಯಂತ ಅವಶ್ಯಕವಾಗಿದೆ. 2024 ಡಿಸೆಂಬರ್ 27ರಂದು ಈ ಸಮಾವೇಶ ನಡೆಯಬೇಕಿತ್ತು, ಆದರೆ ಮನಮೋಹನ್ ಸಿಂಗ್ ಅವರ ನಿಧನದಿಂದ ಕಾರ್ಯಕ್ರಮ ಮುಂದೂಡಲಾಯಿತು.ಗಾಂಧೀಜಿಯ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ. ಬಿಜೆಪಿಯವರು ಅಂಬೇಡ್ಕರ್ ಅವರ ಬಗ್ಗೆ ಬಹಳ ಪ್ರೀತಿ ತೋರಿಸುತ್ತಿದ್ದಾರೆ ಅಂಬೇಡ್ಕರ್ ವಿಚಾರಧಾರೆಗಳ ಜಾರಿ ಹಾಗೂ ರಕ್ಷಣೆ ಮಾಡಬೇಕಿದೆ ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ತಿಳಿಸಿದರು.
ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ನಾವು ನುಡಿದಂತೆ ನಡೆದಿದ್ದೇವೆ ಬಿಜೆಪಿಯ ಸಿದ್ಧಾಂತ ಒಡಕು ಮತ್ತು ತಾರತಮ್ಯ ಮಾಡುವುದಾಗಿದೆ. ಗ್ಯಾರೆಂಟಿ ಯೋಜನೆ ಜಾರಿ ಮಾಡಿದರೆ ಅಭಿವೃದ್ಧಿಗೆ ಹಣ ಇಲ್ಲ ಅಂದರು ಇಂದು ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ ಅಲ್ಲದೆ ಎಲ್ಲಾ ಅಭಿವೃದ್ಧಿಗಳಿಗೆ ಹಣ ಕೂಡ ನೀಡುತ್ತಿದ್ದೇವೆ. 2013 ರಿಂದ 2018ರವರೆಗೆ ನಮ್ಮ ಸರ್ಕಾರ ಅನೇಕ ಯೋಜನೆಗಳನ್ನು ನೀಡಿದೆ. ಎಲ್ಲಾ ಸಮುದಾಯದ ಬಡವರಿಗೆ ನಾವು ಯೋಜನೆಗಳನ್ನು ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.