ಮಂಗಳೂರು : ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದೀಗ ಸ್ಥಳ ಮಹಜರು ವೇಳೆ ದರೋಡೆಕೋರ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ಹೌದು ಮಂಗಳೂರು ಬ್ಯಾಂಕ್ ನಲ್ಲಿ ಚಿನ್ನಾಭರಣ ನಗದು ದರೋಡೆ ಕೇಸ್ ಗೆ ಸಂಬಂಧಪಟ್ಟಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಮುಂಬೈ ಕಣ್ಣನ್ ಮಣಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಮುಂಬೈ ಕಣ್ಣನ್ ಮಣಿ ಪರಾರಿ ಆಗಲು ಯತ್ನಿಸಿದ್ದಾನೆ. ಈ ವೇಳೆ ಮಂಗಳೂರಿನ ಉಳ್ಳಾಲದ ಬಳಿ ಈ ಒಂದು ಗೂಡಿನ ದಾಳಿ ನಡೆದಿದೆ.
ಆರೋಪಿಗಳು ಅರೆಸ್ಟ್
ಮಂಗಳೂರು ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಬಳಿ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ದರೋಡೆಕೋರರನ್ನ ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ.
ಬಂಧಿತರನ್ನು ಮುರುಗನ್ಡಿ , ಮಣಿವಣ್ಣನ್ ಎಂದು ತಿಳಿದುಬಂದಿದೆ.ಆರೋಪಿಗಳು ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರ್ ಬೆನ್ನಟ್ಟಿದ್ದ ಪೊಲೀಸರು. ಕೃತ್ಯ ನಡೆಸಿದ ಬಳಿಕ ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಆರೋಪಿಗಳು ಪರಾರಿಯಾಗಿದ್ದರು. ಮಂಗಳೂರು ಪೊಲೀಸ್ ತಂಡ ಮಹತ್ವದ ಕಾರ್ಯಾಚರಣೆ ನಡೆಸಿ ರಾಜ್ಯದ ಅತಿದೊಡ್ಡ ದರೋಡೆ ಪ್ರಕರಣವನ್ನು ಭೇದಿಸಿದ್ದಾರೆ.