ಧಾರವಾಡ : ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ.
ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆ ನೀಡಲಾಗಿದ್ದು,ಇದೀಗ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿ, ಗಡಿ ಪರಿಮಿತಿ ನಿಗದಿಪಡಿಸಲಾಗಿದೆ.
ಈ ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ/ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ಎಲ್ಲಾ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣಸಹಿತವಾಗಿ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿ.ವಿ.ಗೋಪುರ, ಬೆಂಗಳೂರು ಇವರಿಗೆ ಸಲ್ಲಿಸಬೇಕೆಂದು ಹಾಗೂ ಅಧಿಸೂಚನೆಯನ್ನು ಸದರಿ ಅವಧಿಯ ತರುವಾಯ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.