ಮೈಸೂರು: ಮೈಸೂರು ಜಿಲ್ಲೆಯಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಪತ್ನಿ ತವರಿಗೆ ಹೋಗಿದಕ್ಕೆ ಪುತ್ರನ ಎದುರಲ್ಲೇ ಪೆಟ್ರೋಲ್ ಸುರಿದು ಪಾಪಿ ಪತಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿ ಈ ಘಟನೆ ನಡೆದಿದೆ. ಪತ್ನಿ ಮಧುರಾ ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದ ಪತಿ ಮಲ್ಲೇಶ್ ನಾಯ್ಕ್ ಮನೆಗೆ ಬರುತ್ತಿದ್ದಂತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಧುರಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಲ್ಲೇಶ್ ನಾಯ್ಕ್ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿ.ಬಿ. ತಾಂಡಾ ನಿವಾಸಿಯಾಗಿದ್ದು, ಎಂಟು ವರ್ಷದ ಹಿಂದೆ ಮದುವೆಯಾಗಿತ್ತು. ಅದೇ ಗ್ರಾಮದ ಮಧುರಾ ಮದುವೆಯಾಗಿದ್ದ ಮಲ್ಲೇಶ್ ಹೆಚ್.ಡಿ. ಕೋಟೆ ಕೆಎಸ್ಆರ್ ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ. ಹೆಚ್.ಡಿ. ಕೋಟೆಯ ಹನುಮಂತನಗರದಲ್ಲಿದ್ದ ಮಲ್ಲೇಶ್ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿತ್ಯ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.
ಇದರಿಂದ ನೊಂದ ಪತ್ನಿ ಮಧುರಾ ಕೆಲದ ದಿನಗಳು ತವರು ಮನೆಗೆ ಹೋಗಿದ್ದರು. ಇದರಿಂದ ಸಿಟ್ಟಾದ ಮಲ್ಲೇಶ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಧುರಾ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.