ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಪುಂಡಾಟ ನಡೆಸಿದ್ದು, ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್-ಚಂದಾಪುರ ರಸ್ತೆಯ ಮರಸೂರಿನಲ್ಲಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಕಾರಿನ ಸನ್ ರೂಫ್ ಓಪನ್ ಮಾಡಿ ರ್ಯಾಶ್ ಡ್ರೈವಿಂಗ್ ಮಾಡಿದ್ದಾರೆ. ವೇಗವಾಗಿ ಕಾರು ಚಲಾಯಿಸಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ ಹಳ್ಳಕ್ಕೆ ಕಾರು ಪಲ್ಟಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿಗಳು ಕುಡಿದು ಗಾಡಿ ಚಲಾಯಿಸಿ ಅಪಘಾತ ಮಾಡಿದ್ದಾರೆ. ವಿದ್ಯಾರ್ಥಿಗಳ ವರ್ತನೆಗೆ ಸಾರ್ವಜನಿಕರು ಆಕ್ರೋಶ ಹೊರ ವ್ಯಕ್ತಪಡಿಸಿದ್ದಾರೆ.