ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 23 ನಾಳೆಯಿಂದ ಜನವರಿ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳʼವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 23 ರಿಂದ 25ರ ವರೆಗೆ ʼಸಾವಯವ ಮತ್ತು ಸಿರಿಧಾನ್ಯ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2025’ ಅನ್ನು ಹಮ್ಮಿಕೊಳ್ಳಲಾಗಿದೆ. ಮೂರು ದಿನ ನಡೆಯುವ ಈ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು. 30ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ತಜ್ಞರು ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.