ಬೆಂಗಳೂರು : ಒಂದು ಕಡೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಯಾರು ಮಾತನಾಡದಂತೆ ಬಾಯಿ ಮುಚ್ಚಿ ನಿಮ್ಮ ನಿಮ್ಮ ಕೆಲಸ ಮಾಡಿ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಇನ್ನೊಂದು ಕಡೆ ಡಿಕೆ ಶಿವಕುಮಾರ್ ಬೆಂಬಲಿಗರು ನೆಕ್ಸ್ಟ್ ಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗುತ್ತಿದ್ದಾರೆ. ಇದರ ಮಧ್ಯ ಬಿಜೆಪಿ ಎಂಎಲ್ಸಿ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು,ಡಿಸಿಎಂ ಡಿ.ಕೆ.ಶಿವಕುಮಾರ್ ರಾಜ್ಯಕ್ಕೆ ಮುಖ್ಯಮಂತ್ರಿಯಾಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಅನಾವಶ್ಯಕವಾಗಿ ಸಿಎಂ ಸಿದ್ದರಾಮಯ್ಯ ಅವರು ಹಬ್ಬಿಸುತ್ತಿರುವ ಗೋಜಲು ಇದು. ಕಾಂಗ್ರೆಸ್ ಪಕ್ಷದ ನೇಮ್ ಅಂಡ್ ಫೇಮ್ ಹಾಳು ಮಾಡುತ್ತಿದ್ದಾರೆ. ಇವರೇನು ಕಾಂಗ್ರೆಸ್ ಕಟ್ಟಿದವರಲ್ಲವಲ್ಲ, ಅವರಿಗೆ ಏನಾಗಬೇಕು. ಅವರದ್ದು ಮುಗಿಯಿತಲ್ಲ, ಇದು ಅನಾವಶ್ಯಕ.
ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷವನ್ನು ಕಟ್ಟಿದವರಲ್ಲ. ಕಾಂಗ್ರೆಸ್ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯನವರಿರುವುದು ಖಚಿತ. ಮಂತ್ರಿಗಳು ಯಾರು ಕೇಳುತ್ತಿದ್ದಾರೆ, ಮಂತ್ರಿಗಳು ನೆಪಮಾತ್ರ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್ ಅವರ ಕೊಡುಗೆ ಬಹಳಷ್ಟಿದೆ. ಅವರದು ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ ಮುಂದೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.