ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ.
ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ.
ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ.
ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ.
ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ ದೇವತೆ ಎಂದೂ ಪ್ರಸಿದ್ಧ.
ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ ಕರೆಯುತ್ತಾರೆ. ಈತ ದಕ್ಷಿಣ ದಿಕ್ಕಿನ ಅಧಿಧಿಪತಿ. ಇವನು ಸೂರ್ಯನ ಮಗ. ಶನಿಯ ತಮ್ಮ. ಈತನ ಆಯುಧ ದಂಡ.
ನಿಋುತಿ: ನೈಋುತ್ಯ ದಿಕ್ಕಿನ ಒಡೆಯ. ನಿಋುತಿಯ ಆಯುಧ ಖಡ್ಗ. ದುಷ್ಟ ಶಕ್ತಿಗಳಿಂದ ರಕ್ಷಿಸುತ್ತಾನೆ. ಆರಾಧನೆಯಿಂದ ದೀರ್ಘಾಯಸ್ಸು ಲಭಿಸುತ್ತದೆ.
ವಾಯು: ವಾಯುವ್ಯ ದಿಕ್ಕಿನ ದೇವತೆ. ಇವನ ಆಯುಧ ಅಂಕುಶ. ಹನುಮನ ತಂದೆ. ಈತನನ್ನು ಪವನ, ಪ್ರಾಣ ಎಂತಲೂ ಕರೆಯುತ್ತಾರೆ. ಭಗವದ್ಗೀತೆಯ ಹತ್ತನೆಯ ಅಧ್ಯಾಯವಾದ ವಿಭೂತಿಯೋಗದಲ್ಲಿ ಶ್ರೀಕೃಷ್ಣನು ತನ್ನ ಭಾವ ವಾಯುವಿನಂತೆ ಇದೆ ಎಂದು ಹೇಳುತ್ತಾನೆ.
ಕುಬೇರ: ಕುಬೇರ ಮಿಶ್ರವಶುವಿನ ಮಗ. ಈತನ ಆಯುಧ ಗಧೆ. ಕುಬೇರ ಹಿಂದೂ ಪುರಾಣಗಳ ಪ್ರಕಾರ ಯಕ್ಷ ಮತ್ತು ಧನ ಸಂಪತ್ತಿನ ದೇವತೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ವರುಣ: ವರುಣನ ಆಯುಧ ಪಾಶ. ಹಿಂದೂ ಪುರಾಣಗಳ ಪ್ರಕಾರ ನೀರಿನ ದೇವತೆ.
ಈಶಾನ:- ಇವನ ಆಯುಧ ತ್ರಿಶೂಲ. ಸಂಪತ್ತು, ಆರೋಗ್ಯ ಹಾಗೂ ಯಶಸ್ಸಿನ ದೇವತೆ. ಈತ ಜ್ಞಾನವನ್ನು ಕೊಟ್ಟು, ದುಃಖವನ್ನು ದೂರ ಮಾಡುತ್ತಾನೆ ಎಂಬ ನಂಬಿಕೆ ಇದೆ.