ಬೆಂಗಳೂರು: ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಬೆಂಗಳೂರು ವತಿಯಿಂದ ಸ್ಟಡಿ ಸರ್ಕಲ್ ಯೋಜನೆಯಡಿಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಪ್ರಾಧಿಕಾರಿಗಳು ನಡೆಸುವ ನೇಮಕಾತಿ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.
ಜನವರಿ 27 ರಿಂದ ಫೆಬ್ರವರಿ 4 ರವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಪರೀಕ್ಷಾ ಪೂರ್ವ ತರಬೇತಿಯು ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಡೆಯಲಿದೆ.
ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಸಿ.ಓ.ಇ ಕಟ್ಟಡ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಪೀಣ್ಯ, ಬೆಂಗಳೂರು ಅಥವಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 2ನೇ ಬ್ಲಾಕ್ , ರಾಜಾಜಿನಗರ, ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.