Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Muharram 2025 : ಜುಲೈ 6 ಅಥ್ವಾ 7.? ಭಾರತದಲ್ಲಿ ‘ಮೊಹರಂ’ ಯಾವ ದಿನ ಆಚರಿಸಲಾಗುತ್ತೆ ಗೊತ್ತಾ.?

05/07/2025 7:56 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಕರ್ನಾಟಕದ `ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಿದ್ಧ.!
KARNATAKA

ದೆಹಲಿ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ಕರ್ನಾಟಕದ `ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು’ ಸ್ತಬ್ಧಚಿತ್ರ ಸಿದ್ಧ.!

By kannadanewsnow5723/01/2025 6:21 AM

ಬೆಂಗಳೂರು : ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‍ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಇಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಐಪಿಎಸ್ ಅವರು ನುಡಿದರು.

ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ. ಈ ಪೈಕಿ ಐತಿಹಾಸಿಕ ಪಟ್ಟಣವಾದ ಗದಗದ ಲಕ್ಕುಂಡಿಯು ಒಂದಾಗಿದೆ. ಅಹಿಂಸಾವಾದಿಯ ನೆಲೆಬೀಡು. ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿವೆ. ಜೊತೆಗೆ, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಇದೇ ಜನವರಿ 26 ರಂದು ಎಲ್ಲರ ಮನಸೂರೆಗೊಳ್ಳಲಿದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ವಾರ್ತಾ ಇಲಾಖೆಯ ಆಯುಕ್ತರು ತಿಳಿಸಿದರು.

ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 15 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂಗತಿ ಎಂದು ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

2025ರ ಜನವರಿ 26ರಂದು ನಡೆಯುವ ದಹೆಲಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸುವ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು
1. ಲಕ್ಕುಂಡಿ : ಶಿಲ್ಪಕಲೆಯ ತೊಟ್ಟಿಲು (Lakkundi – The Cradle of Stone Craft)
2. ಮೆಕ್ಕೆಕಟ್ಟು : ಮರಕೆತ್ತನೆಯ ದೈವ ನಿಧಿ (Mekkekattu – “Wood Carved Treasures of Divinity)
3. ಕರ್ನಾಟಕದ ಸಮೃದ್ದಿಯ ಆಚರಣೆಗಳು (Rituals of Prosperity) ಮತ್ತು
4. ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು (Karnataka “One State. Many Worlds) ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿಕಳುಹಿಸಿತ್ತು. ಮೊದಲ ಸಭೆಯಲ್ಲಿಯೇ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗಣವಾಗಿ ಈ ಬಾರಿಯ ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ ಎಂದು ನಿಂಬಾಳ್ಕರ್ ಅವರು ತಿಳಿಸಿದರು.

ವಿಷಯ ಆಯ್ಕೆಯ ಬಳಿಕ ಲಕ್ಕುಂಡಿಯ ಶಿಲ್ಪಕಲೆಯ ವೈಭವವನ್ನು ಅದರ ಪ್ರತಿರೂಪದಂತೆ ʼಕೆತ್ತುವʼ ಬೃಹತ್ ಸವಾಲು ಎದುರಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಪೆÇ್ರೀತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದಿತ್ತು. ಪ್ರವಾಸೋದ್ಯಮ ಮತ್ತು ಗದುಗಿನ ಉಸ್ತುವಾರಿ ಸಚಿವರಾದ ಶ್ರೀ ಹೆಚ್.ಕೆ. ಪಾಟೀಲ್ ಅವರ ಮಾರ್ಗದರ್ಶನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯು ಆಯುಕ್ತರು ಹೇಳಿದರು.

ಗದಗದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ. ಶರಣು ಗೋಗೇರಿ ಅವರು ಒದಗಿಸಿದ ಛಾಯಾಚಿತ್ರಗಳು ಮತ್ತು ಮಾಹಿತಿ ಸೇರಿದಂತೆ ವಿಷಯ ಪರಿಣತರು – ತಜ್ಞರು, ಕಲಾನಿರ್ದೇಶಕರು ಮತ್ತು ಕಲಾವಿದರೊಂದಿಗೆ ಪರಾಮರ್ಶಿಸಿಕೊಂಡು ಇಲಾಖೆಯು ಈ ಕೆಲಸವನ್ನು ಕೈಗೆತ್ತಿಕೊಂಡಿತ್ತು. ಹಾಕಿಕೊಂಡ ಕಾರ್ಯತಂತ್ರದ ರೂಪು ರೇμÉಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದೆ. ಇದಕ್ಕಾಗಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೈಜೋಡಿಸಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ. ಆರಂಭದಲ್ಲಿ ದೆಹಲಿಯಲ್ಲಿ ಕವಿದಿದ್ದ ದಟ್ಟ ಮಂಜು, ಹೊಂಜು ಮತ್ತು ಮಳೆ ಎಲ್ಲವೂ ಸವಾಲುಗಳು ಕಂಡಿದ್ದವು. ಇಂದು ಅವುಗಳೆಲ್ಲವೂ ಈ ನಮ್ಮ ಸ್ತಬ್ಧಚಿತ್ರದಲ್ಲಿ ಕರಗಿ ಹೋಗಿವೆ. ಜೀವಕಳೆಯಿಂದ ಕೂಡಿರುವ ಸ್ತಬ್ಧಚಿತ್ರವನ್ನು ರಾಜ್ಯದ ಪರವಾಗಿ ಪ್ರದರ್ಶಿಸಿಸುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತದೆʼ ಎಂದು ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ತಮ್ಮ ಸಂತಸವನ್ನು ಹಂಚಿಕೊಂಡರು.

ವಿಷಯ ಆಯ್ಕೆಯ ಬಳಿಕ, ಸ್ತಬ್ಧಚಿತ್ರದ ಮಾದರಿ (ಕೀ ಮಾಡಲ್) ಮತ್ತು ಸಂಗೀತದ ಹಂತವನ್ನು ದಾಟಬೇಕಾಗಿತ್ತು. ಅಂತರರಾಷ್ಟ್ರೀಯ ಖ್ಯಾತಿಯ ಕಲಾನಿರ್ದೇಶಕ ಶ್ರೀ ಶಶಿಧರ ಅಡಪ ಅವರು ವಿನ್ಯಾಸ ಮಾಡಿಕೊಟ್ಟ ಮಾದರಿಗೆ ಆಯ್ಕೆ ಸಮಿತಿ ಮೊದಲ ಹಂತದಲ್ಲೇ ಅನುಮೋದನೆ ನೀಡಿತ್ತು. ಸಂಗೀತ ನಿರ್ದೇಶಕ ಶ್ರೀ ಪ್ರವೀಣ್ ಡಿ. ರಾವ್ ಅವರ ʼಕನ್ನಡ ಸಂಗೀತʼವನ್ನು ಹಾಗೆಯೇ ಉಳಿಸಿಕೊಂಡಿದೆ. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದ ಕಲಾವಿದರಿಂದ ಕೂಡಿರುವ 18 ಮಂದಿ ತಂಡವನ್ನು ಜಗ್ಗಲಿಗೆ ಕಲಾವಿದರಾದ ಶ್ರೀ ಲಿಂಗಯ್ಯ ಅವರು ಮುನ್ನಡೆಸುತ್ತಾರೆ. ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆಯಲಿದ್ದಾರೆ. ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಳ್ಳಲಿದ್ದಾರೆ.

ಸ್ತಬ್ಥಚಿತ್ರದಲ್ಲಿ ಏನಿರಲಿದೆ: ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ತೀವ್ರ ಪೈಪೆÇೀಟಿ : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿμÉ್ಠಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 15ಕ್ಕೆ ಇಳಿಸಿದೆ. ಇದು ತೀವ್ರ ಪೈಪೆÇೀಟಿಗೆ ಕಾರಣವಾಗಿದೆ. ಅμÉ್ಟೀ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿμÉ್ಠಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗಳ ಸರಮಾಲೆ: 2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿμÉೀಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾ ಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ.

Delhi Republic Day Tableau 2025: 'Lakkundi: Cradle of Sculpture' unveiled in stone ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ -2025 : ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ.!
Share. Facebook Twitter LinkedIn WhatsApp Email

Related Posts

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM1 Min Read

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM3 Mins Read

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM1 Min Read
Recent News

Muharram 2025 : ಜುಲೈ 6 ಅಥ್ವಾ 7.? ಭಾರತದಲ್ಲಿ ‘ಮೊಹರಂ’ ಯಾವ ದಿನ ಆಚರಿಸಲಾಗುತ್ತೆ ಗೊತ್ತಾ.?

05/07/2025 7:56 PM

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM
State News
KARNATAKA

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

By kannadanewsnow0905/07/2025 7:50 PM KARNATAKA 1 Min Read

ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ.…

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.