ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಜಿಲ್ಲೆಯ ಜನರು ಕುತೂಹಲ ಹಾಗೂ ಕಾತುರರಾಗಿದ್ದು, ಜಿಲ್ಲೆಯ ಪಾಲಿಗೆ ಇದೊಂದು ಸಂಭ್ರಮದ ಕ್ಷಣವಾಗಲಿದೆ.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ತಾತ್ಕಾಲಿಕವಾಗಿ ಆರೋಗ್ಯ ಕ್ಲಿನಿಕ್ ತೆರೆದು ಜನರಿಗೆ ಆರೋಗ್ಯ ಸೇವೆ ನೀಡಬೇಕು. ಇದರ ಜೊತೆಗೆ ಆರೋಗ್ಯ ತಂಡ ನಿಯೋಜನೆ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.