ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಇದೀಗ ಮಂಗನ ಕಾಯಿಲೆ ಭೀತಿ ಮತ್ತೆ ಆರಂಭವಾಗಿದ್ದು, ಇದೀಗ ಇಬ್ಬರಲ್ಲಿ ಮಂಗನ ಕಾಯಿಲೆ ರೋಗ ದೃಢವಾಗಿರುವುದು ವರದಿಯಾಗಿದೆ.
ಹೌದು, ಕೊಪ್ಪದ ಕೆಸವೆ ಹಾಗೂ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಸೀದಿ ಕೆರೆಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಜನವರಿಯಲ್ಲಿ ಒಟ್ಟು 4 ಪ್ರಕರಣಗಳು ದಾಖಲಾಗಿವೆ.
ಮಂಗನಕಾಯಿಲೆ ಪ್ರರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುವ ಸಂದರ್ಭದಲ್ಲಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ಇದೀಗ ಮಂಗನ ಕಾಯಿಲೆಯಿಂದ ಜನರು ಭಯ ಭೀತರಾಗಿದ್ದಾರೆ.