ಹಾಸನ : ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಕಾಂತಾರಾ-2 ಚಿತ್ರತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು, ಅರಣ್ಯಾಧಿಕಾರಿಗಳು ನಿಯಮ ಉಲ್ಲಂಘನೆ ಆಗಿಲ್ಲ ಎಂದು ವರದಿ ನೀಡಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗವಿಗುಡ್ಡದಲ್ಲಿ ಕಾಂತಾರಾ-2 ಚಿತ್ರೀಕರಣದ ವೇಳೆ ಮರಗಳನ್ನು ಕಡಿಯಾಗಿದೆ. ಸ್ಪೋಟಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಇದೀಗ ವರದಿ ನೀಡಿದ್ದು, ಕಾಂತಾರಾ ಚಿತ್ರತಂಡ ನಿಯಮ ಉಲ್ಲಂಘಿಸಿಲ್ಲ ಎಂದು ತಿಳಿಸಿದೆ.
ಮರ ಕಡಿದ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದು, ಕಾಂತಾರಾ-2 ಚಿತ್ರತಂಡ ಯಾವುದೇ ಮರಗಳನ್ನು ಕಡಿದಿಲ್ಲ. ನಿಯಮ ಉಲ್ಲಂಘಿಸಿಲ್ಲ ಎಂದು ವರದಿ ನೀಡಿದೆ.