ಹಾಸನ : ಶಾಲೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಇದೀಗ ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿಯಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿಯೊಬ್ಬನ ಫೋನ್ ಲೊಕೇಶನ್ ಆಧರಿಸಿ ವಿದ್ಯಾರ್ಥಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಕುನಿಗನಹಳ್ಳಿ ಗ್ರಾಮದ ಶರತ್ (16), ಧನಂಜಯ್ (16), ಮುರುಳಿ (16) ನಿನ್ನೆ ಬೆಳಗ್ಗೆ 7.30 ಕ್ಕೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದರು. ಮೂವರು ವಿದ್ಯಾರ್ಥಿಗಳು ನಿನ್ನೆ ಶಾಲೆಗೆ ಗೈರಾದ ಹಿನ್ನೆಲೆಯಲ್ಲಿ ಪೋಷಕರಿಗೆ ಶಿಕ್ಷಕರು ಕರೆ ಮಾಡಿ ತಿಳಿಸಿದ್ದರು. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗಾಗಿ ಗ್ರಾಮದ ತುಂಬ ಹುಡುಕಾಡಿದ್ದಾರೆ. ಆದರೆ ಎಲ್ಲೂ ಪತ್ತೆ ಆಗಿಲ್ಲ. ರಾತ್ರಿ ಆದರೂ ಮಕ್ಕಳು ಮನೆಗೆ ಬಂದಿಲ್ಲ. ಶರತ್ ಬಳಿಯ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಸದ್ಯ ಪೋಷಕರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇಂದು ಪೊಲೀಸರು ನಾಪತ್ತೆಯಾದ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿದ್ದಾರೆ.