ರಾಮನಗರ : ರಾಮನಗರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮೈಕ್ರೋ ಫೈನಾನ್ಸ್ ಕಂಪನಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯೂನಿಟಿ ಸ್ಮಾಲ್ ಫೈನಾನ್ಸ್, ಆಶೀರ್ವಾದ್ ಮೈಕ್ರೋ ಫೈನಾನ್ಸ್, ಸತ್ಯಾ ಮೈಕ್ರೋ ಕ್ಯಾಪಿಟಲ್ ಫೈನಾನ್ಸ್ ಲಿಮಿಟೆಡ್, ಸೂರ್ಯೋದಯ ಫೈನಾನ್ಸ್, ಐಐಎಫ್ ಎಲ್ ಸಮಸ್ತ ಫೈನಾನ್ಸ್ ಲಿಮಿಟೆಡ್, ಎಲ್ ಅಂಡ್ ಟಿ ಫೈನಾನ್ಷಿಯಲ್ ಸರ್ವಿಸ್ ಹಾಗೂ ಬಿಎಸ್‌ಎಸ್ ಮೈಕ್ರೋ ಫೈನಾನ್ಸ್ ಲಿಮಿಟೆಡ್ ಮ್ಯಾನೇಜರ್ ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ರಾಮನಗರ ತಾಲೂಕು ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋಧಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದು, ಹೀಗಾಗಿ ತಮ್ಮ ತಾಯಿ ಆತ್ಮಹತ್ಯೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳವೇ ಕಾರಣ ಎಂದು ಆರೋಪಿಸಿ ಪುತ್ರ ಕುಮಾರ್ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 7 ಮೈಕ್ರೋ ಫೈನಾನ್ಸ್ ಕಂಪನಿಗಳ ಮ್ಯಾನೇಜರ್ ಮತ್ತು ಸಿಬ್ಬಂದಿಗಳ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.