ಬಳ್ಳಾರಿ : ಬಿಜೆಪಿಯ ಶಾಸಕ ಜನಾರ್ಧನ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ನಡುವಿನ ಸ್ನೇಹದಲ್ಲಿ ಇದೀಗ ಬಿರುಕು ಮೂಡಿದೆ. ಇದರ ಮಧ್ಯ ಬಿ ಶ್ರೀರಾಮುಲು ಅವರು ಮತ್ತೊಂದು ಹೇಳಿಕೆ ನೀಡಿದ್ದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ನೀಡಿದರೆ ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದರು.
ಇಂದು ಬಳ್ಳಾರಿಯಲ್ಲಿ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನವನ್ನು ಕೊಟ್ಟರೆ ಒಪ್ಪಿಕೊಳ್ಳುತ್ತೇನೆ. ಸಣ್ಣವರೆಲ್ಲ ರಾಜ್ಯಾಧ್ಯಕ್ಷರಾಗುತ್ತಿದ್ದಾರೆ ಅದಕ್ಕಾಗಿ ರಾಜ್ಯಾಧ್ಯಕ್ಷರ ಆಯ್ಕೆಗೆ ವೋಟಿಂಗ್ ಮಾಡಿದ್ದಾರೆ ಎಂದು ಶ್ರೀರಾಮುಲು ಅವರು ತಿಳಿಸಿದ್ದಾರೆ.
ನನಗೂ ಅಧ್ಯಕ್ಷರಾಗಬೇಕೆಂಬ ಆಸೆ ಇದೆ ನೇಮಿಸಿದರೆ ಒಪ್ಪಿಕೊಳ್ಳುತ್ತೇನೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಎಲೆಕ್ಷನ್ ಮಾಡಿದರೆ ಒಪ್ಪಿಕೊಳ್ಳಲ್ಲ. ನಾನು ಎಲೆಕ್ಷನ್ ನಲ್ಲಿ ಸೋತಿದ್ದೇನೆ. ನಿರುದ್ಯೋಗಿಯಾಗಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಕೂಡ್ಲಿಗಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಕೂಡ್ಲಿಗಿಯಲ್ಲಿ ಮುಂದುವರಿಯುವೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಳ್ಳಾರಿಯಲಿ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.
ಇದೆ ವೇಳೆ ಬಳ್ಳಾರಿಯಲ್ಲಿ ಬೆಂಬಲಿಗರ ಜೊತೆಗೆ ಶ್ರೀರಾಮುಲು ಸಭೆ ನಡೆಸಿದ್ದು, ಮುಂದಿನ ರಾಜಕೀಯ ನಡೆಯ ಬಗ್ಗೆ ಶ್ರೀರಾಮುಲು ಬೆಂಬಲಿಗರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಿನಳ್ಳಿ ತಾಯಣ್ಣ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಮತ್ತು ಪ್ರಮುಖ ಮುಖಂಡರು ಭಾಗಿಯಾಗಿದ್ದಾರೆ.